ಮುಲ್ಕಿ:ಕಿಲ್ಪಾಡಿ ಗ್ರಾಮ ಪಂಚಾಯತ್ 2022-23 ನೇ ಸಾಲಿನ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ನೊಂಡಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ವಹಿಸಿದ್ದರು.ಮಂಗಳೂರು ದಕ್ಷಿಣ.ತಾಲೂಕು ಸಂಯೋಜಕಿ ಧನಲಕ್ಷ್ಮೀ ಮಾತನಾಡಿ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯ ಮೂಲಕ ಕಾಮಗಾರಿಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಸಾಧ್ಯ. ಗ್ರಾಮಸ್ಥರು ಯಾವುದೇ ಕಾಮಗಾರಿಯ ಬಗ್ಗೆ ವಿವರಗಳನ್ನು ಪಡೆಯಬಹುದು ಎಂದರು.
ಪಂಚಾಯತ್ ಅಧ್ಯಕ್ಷೆಲೀಲಾವತಿ, ಉಪಾಧ್ಯಕ್ಷ ಗೋಪಿನಾಥ್ ಪಡಂಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ನರೇಗ ಇಂಜಿನಿಯರ್ ಅಜಿತ್, ರೈತ ಸಂಪರ್ಕ ಕೇಂದ್ರದ ಷಣ್ಮುಖ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿ ಬಳಿಕ ತಾಲೂಕು ಸಂಯೋಜಕರು ಕಡತಗಳ ಬಗ್ಗೆ ಮತ್ತು ಕಾಮಗಾರಿಗಳ ಗುಣಮಟ್ಟದ ಬಗ್ಗೆ ವಿವರಿಸಿದರು.
Kshetra Samachara
09/08/2022 05:37 pm