ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ನಗರದ ಮೇರಿಹಿಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಗೃಹರಕ್ಷಕರಿಗೆ ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ ನಡೆಯಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಲಯದ ಜೀವ ರಕ್ಷಾ ಟ್ರಸ್ಟ್ ನ ವ್ಯವಸ್ಥಾಪಕ ಡಾ.ಕಿಶನ್ ರಾವ್ ಬಾಳಿಲ ಮಾತನಾಡಿ ಹೃದಯಾಘಾತದ ಸಂದರ್ಭದಲ್ಲಿ ಸಾಮಾನ್ಯ ಜನರೂ ಕೂಡ ಆರೋಗ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸನ್ನದ್ದರಾಗಬೇಕಾಗಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಬಹು ದೊಡ್ಡ ಆರೋಗ್ಯ ವಿಶ್ವವಿದ್ಯಾಲಯವಾದ ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಅಂಗ ಸಂಸ್ಥೆಯಾದ ಜೀವರಕ್ಷಾ ಟ್ರಸ್ಟ್ ವತಿಯಿಂದ ರಾಜ್ಯದೆಲ್ಲೆಡೆ ಸಾಮಾನ್ಯ ಜನರಿಗೆ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಸಮಾಜದ ಆರೋಗ್ಯ ರಕ್ಷಿಸುವಲ್ಲಿ ಬಹುಮುಖ್ಯ ಭೂಮಿಕೆ ವಹಿಸುವ ಗೃಹರಕ್ಷಕರಿಗೆ ವಿಶೇಷ ತರಬೇತಿ ನೀಡಿ ಜನರ ಜೀವ ರಕ್ಷಣೆಯ ಹೊಣೆಗಾರಿಕೆಯನ್ನು ವಹಿಸಲುಕಾರ್ಯಸೂಚಿ ತಯಾರಾಗಿದೆ. ಮುಂದೆ ಗೃಹರಕ್ಷಕರು ಜೀವರಕ್ಷಕರಾಗಿ ಸಮಾಜದ ಜನರ ಜೀವ ರಕ್ಷಿಸಲು ಸನ್ನದ್ದರಾಗಿದ್ದಾರೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ. ಮುರಲೀ ಮೋಹನ್ ಚೂಂತಾರು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಡಾ: ನಮ್ರತಾ ಶೆಟ್ಟಿ , ಡಾ.ಶೈಲಜಾ ಕಟ್ಟಿ, ಕೋರ್ಸ್ ಡೈರೆಕ್ಟರ್, ಜಿನ್ಸಿ, ಕೋರ್ಸ್ ಇನ್ಸ್ ಪೆಕ್ಟರ್ ಉಪ ಸಮಾದೇಷ್ಟ ರಮೇಶ್ ಉಪಸ್ಥಿತರಿದ್ದರು. 15 ಮಂದಿ ಗೃಹರಕ್ಷಕರಿಗೆ ತರಬೇತಿಯನ್ನು ನೀಡಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
Kshetra Samachara
19/08/2022 08:51 pm