ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು ವಲಯ ಶಿಕ್ಷಕರ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಶಿಕ್ಷಕರ ದಿನಾಚರಣೆ

ಬೈಂದೂರು :ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಶಿಕ್ಷಕರ ಸಂಘಗಳ ಸಹಭಾಗಿತ್ವದಲ್ಲಿ ಬೈಂದೂರು ವಲಯದ ಶಿಕ್ಷಕರ ದಿನಾಚರಣೆಯು ನಾಗೂರಿನ ಒಡೆಯರ ಮಠದ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ ಎಮ್ ಸುಕುಮಾರ ಶೆಟ್ಟಿ ಯವರು ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು ಉತ್ತಮ ಸಮಾಜದ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದರು.ಇದೆ ಸಂದರ್ಭದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಿವೃತ್ತರಾದ 22 ಜನ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಳೆದ ಬಾರಿಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೂ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅವರನ್ನು ಗುರುತಿಸಿ ಗೌರವ ಸಮರ್ಪಣೆ ಮಾಡಲಾಯಿತು.ಶಿಕ್ಷಕ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಈ ವೇಳೆಯಲ್ಲಿ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಿಕ್ಷಕಿಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬೈಂದೂರುವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ, ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ,

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ , ವಿಶ್ವನಾಥ ಪೂಜಾರಿ. ಸಭಾಭವನದ ಮಾಲೀಕರಾದ ಮಂಜುನಾಥ ಉಡುಪ ಮತ್ತಿತರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಜಿ ಮಂಜುನಾಥ ಸ್ವಾಗತಿಸಿದರು ಸಮನ್ವಯ ಅಧಿಕಾರಿ ಕರುಣಾಕರ ಶೆಟ್ಟಿ ಪ್ರಾಸ್ತಾವಿಕ

ನುಡಿಗಳನಾಡಿದರು ಚಂದ್ರಶೇಖರ ಶೆಟ್ಟಿ ಇಸಿಓ ಸತ್ಯನಾರಾಯಣ ಬಿ ಆರ್ ಪಿ ಸುಧಾಕರ ದೇವಾಡಿಗ ಮತ್ತು ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು..

Edited By : PublicNext Desk
Kshetra Samachara

Kshetra Samachara

06/09/2022 03:52 pm

Cinque Terre

736

Cinque Terre

0

ಸಂಬಂಧಿತ ಸುದ್ದಿ