ಮುಲ್ಕಿ: ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ತಾಲೂಕು ಪಂಚಾಯತ್ ಮಂಗಳೂರು, ಕಿಲ್ಪಾಡಿ ಗ್ರಾಮ ಪಂಚಾಯತ್ 2021 22ನೇ ಸಾಲಿನ ವಾರ್ಷಿಕ ಜಮಾ ಬಂದಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು.
ನೋಡಲ್ ಅಧಿಕಾರಿಯಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಪ್ರವೀಣ್ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಹಿತ ಅನೇಕ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಉತ್ತರಿಸಿ ಯೋಜನೆಗಳಿಗೆ ಸರಕಾರದಿಂದ ಬರುತ್ತಿರುವ ಸವಲತ್ತುಗಳು ಸರಿಯಾದ ಸಮಯಕ್ಕೆ ಬಾರದೆ ವಿಳಂಬವಾಗುತ್ತಿದ್ದು ಗ್ರಾಮಸ್ಥರು ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ನೋಡಲಾಧಿಕಾರಿಗಳು ಲೆಕ್ಕಪತ್ರ ಪರಿಶೀಲಿಸಿದರು.
ಪಂಚಾಯತ್ ಸದಸ್ಯರಾದ ದಮಯಂತಿ,ರಾಜೇಶ್,ಪಿಡಿಓ ಪೂರ್ಣಿಮಾ, ಜಿಲ್ಲಾ ಪಂಚಾಯತ್ ಜೂನಿಯರ್ ಇಂಜಿನಿಯರ್ ಪ್ರಶಾಂತ್ ಆಳ್ವ, ಸಿಬ್ಬಂದಿ ರಮೇಶ್ ,ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/09/2022 04:07 pm