ಬೈಂದೂರು: ವಿಶೇಷವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಬಹುಮಾನ ಹಾಗೂ ಹಣ,ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಹಾಗೂ ವೈದ್ಯಕೀಯ ಪರಿಹಾರ ನಿಧಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಶೇಷ ವಿಕಲಚೇತನ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ. ಸಂಖ್ಯೆ: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Kshetra Samachara
06/09/2022 05:19 pm