ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಭಾರತರತ್ನ ವಿಶ್ವೇಶ್ವರಯ್ಯ ಜಗತ್ತಿಗೆ ಆದರ್ಶ; ಉದಯಶಂಕರ್ ನೀರ್ಪಾಜೆ

ನಂತೂರು: ಸವಾಲುಗಳನ್ನು ಎದುರಿಸಿಕೊಂಡು, ಹೆಜ್ಜೆಹೆಜ್ಜೆಗೂ ಸಾಧನೆಗಳನ್ನು ಮಾಡುತ್ತ ಜೀವನಪರ್ಯಂತ ಸಾಗಿದ ಭಾರತರತ್ನ ಡಾ. ಸರ್ ಎಂ.ವಿಶ್ವೇಶ್ವರಯ್ಯ ಜಗತ್ತಿಗೇ ಆದರ್ಶವಾಗಿದ್ದಾರೆ. ಪ್ರತಿ ಹೆಜ್ಜೆಗಳಲ್ಲಿ ಯಶಸ್ವಿಯಾದ ಅವರು ಕಳಂಕರಹಿತರಾಗಿ ಶುದ್ಧಹಸ್ತರಾಗಿ ಪ್ರಾಮಾಣಿಕರಾಗಿ ಜೀವನ ನಡೆಸಿದ್ದರು. ಅವರ ಆದರ್ಶಗಳನ್ನು ಇಂದಿನ ಯುವ ಜನಾಂಗ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಉದಯಶಂಕರ್ ನೀರ್ಪಾಜೆ ಹೇಳಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸಹಯೋಗದಲ್ಲಿ ಸಂಸ್ಥೆಯ ಸಭಾಭವನದಲ್ಲಿ ನಡೆದ ಸರ್ ಎಂ. ವಿಶ್ವೇಶ್ವರಯ್ಯ ಜನ್ಮದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಶ್ರೀನಾಥ್ ಎಂ.ಪಿ. ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಕಟೀಲು ಮಾತನಾಡಿದರು

ನಂತೂರು ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್ ದಾಸ್ ಎ., ಕಸಾಪ ಕಾರ್ಯದರ್ಶಿ ವಿನಯ ಆಚಾರ್ಯ ಉಪಸ್ಥಿತರಿದ್ದರು.

ಪ್ರಾಂಶುಪಾಲ ಗಂಗಾರತ್ನ ಸ್ವಾಗತಿಸಿ, ಪ್ರಸ್ತಾಪಿಸಿದರು. ಉಪನ್ಯಾಸಕ ಕಾರ್ತಿಕ್ ಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು.ಉಪಪ್ರಾಂಶುಪಾಲೆ ಗಾಯತ್ರಿ ಶೆಣೈ ವಂದಿಸಿದರು.

Edited By : PublicNext Desk
Kshetra Samachara

Kshetra Samachara

16/09/2022 10:37 am

Cinque Terre

3.36 K

Cinque Terre

1