ಸುರತ್ಕಲ್: ರಾಷ್ಟ್ರೀಯ ಸೇವಾ ಯೋಜನೆ 2020 -2021ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿಗೆ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿನಿ ರಶ್ಮಿ ಜೆ.ಅಂಚನ್ ಆಯ್ಕೆಯಾಗಿದ್ದಾರೆ.ಎನ್ನೆಸ್ಸೆಸ್ ಸ್ವಯಂಸೇವಕಿಯಾಗಿ ಕೆಲಸ ಮಾಡುವಲ್ಲಿ ಪಟ್ಟ ಶ್ರಮ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಬೇಕೆಂಬ ತುಡಿತ ಹಾಗೂ ಇವೆಲ್ಲವನ್ನೂ ಸೇರಿಸಿ ಮಾಡಿದ ಕಠಿಣ ಪರಿಶ್ರಮದಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದೆ. ಈಗ ರಾಷ್ಟ್ರಮಟ್ಟದ ಪುರಸ್ಕಾರಕ್ಕೂ ಆಯ್ಕೆಯಾಗಿದ್ದೇನೆ. ಇದು ನನಗೆ ಅತ್ಯಂತ ಖುಷಿಯ ವಿಷಯ ಎಂದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಜೊತೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.
ಅವರು ಮಾತನಾಡಿ ಎನ್ನೆಸ್ಸೆಸ್ ಕಾರ್ಯಚಟುವಟಿಕೆಗಳ ವೇಳೆ ನಾನು ನಿರ್ವಹಿಸಿದ ಕೆಲಸದ ಬಗ್ಗೆ ತೃಪ್ತಿ ಇದೆ,ಎನ್ನೆಸ್ಸೆಸ್ ಕಾರ್ಯಚಟುವಟಿಕೆಗಳಲ್ಲದೆ ಕಾಲೇಜಿನಲ್ಲಿ ನಡೆಯುವ ಎಲ್ಲ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದೆ. ಅಂತರಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳಲ್ಲೂ ತೊಡಗಿಸಿಕೊಳ್ಳುತ್ತಿದ್ದೆ. ರಾಷ್ಟ್ರಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಜಯಿಸಿದ್ದೂ ನನಗೆ ಉತ್ತಮ ಸ್ವಯಂಸೇವಕಿ ಪ್ರಶಸ್ತಿ ಪಡೆಯಲು ಕಾರಣವಾಯಿತು. ಬಾಲ್ಯದಿಂದಲೇ ಭರತನಾಟ್ಯ ಕಲಿತಿದ್ದು ಈಗಲೂ ಅದರಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ತಿಳಿಸಿದರು.
ರಾಜ್ಯಮಟ್ಟದ ಪುರಸ್ಕಾರಕ್ಕೆ ಆಯ್ಕೆ ಮಾಡುವಾಗ ಅವರು ಹಿಂದಿನ ಸಾಧನೆಗಳ ಬಗ್ಗೆ ರಾಷ್ಟ್ರೀಯ ಕ್ಯಾಂಪ್, ರಾಜ್ಯಮಟ್ಟದ ಕ್ಯಾಂಪ್‌ನಲ್ಲಿ ಭಾಗವಹಿಸುತ್ತಾರೆ ಎಂಬುದು ಗಣನೆಗೆ ಬರುತ್ತದೆ. ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಪರಿಗಣಿಸಲ್ಪಡುತ್ತದೆ ಎಂದರು
ರಶ್ಮಿ ಅಂಚನ್ ಎನ್ನೆಸ್ಸೆಸ್ ಚಟುವಟಿಕೆಯ ಜತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲೂ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಬಹುಮಾನ ಪಡೆದ ಮಾನದಂಡವೂ ಪುರಸ್ಕಾರಕ್ಕೆ ಗಣನೆಗೆ ಬಂದಿದೆ.
Kshetra Samachara
17/09/2022 06:25 am