ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಕಿಟಕಿ ಮುರಿದು ಪರಾರಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಯಶಸ್ವಿನಿ, ದಕ್ಷತಾ, ಸಿಂಚನಾ ಎಂಬ ಮೂವರು ವಿದ್ಯಾರ್ಥಿನಿಯರು ಪರಾರಿಯಾದವರು. ಯಶಸ್ವಿನಿ ಹಾಗೂ ದಕ್ಷತಾ ಬೆಂಗಳೂರು ನಿವಾಸಿಗಳಾಗಿದ್ರೆ, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿಯಾಗಿದ್ದಾರೆ. ನಸುಕಿನ ವೇಳೆ 3 ಗಂಟೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇವರು ಮೂವರೂ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾಗಿದ್ದು, ಅಪ್ರಾಪ್ತರು ಎಂದು ತಿಳಿದು ಬಂದಿದೆ.
'ನಾವು ಹೋಗುತ್ತಿದ್ದೇವೆ, ಕ್ಷಮಿಸಿ' ಎಂದು ಪತ್ರ ಬರೆದಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ವಿದ್ಯಾರ್ಥಿನಿಯರು ಹೋಗಿರುವುದೆಲ್ಲಿಗೆ?, ಯಾಕಾಗಿ ಹೋಗಿರುವುದು ಎಂಬುದು ಇನ್ನೂ ತಿಳಿದು ಬಂದಿಲ್ಲ. ಕಾಲೇಜಿಗೆ ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾರೆ.
Kshetra Samachara
21/09/2022 06:01 pm