ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾಲೂರಿನಲ್ಲಿ ದಲಿತ ಬಾಲಕನಿಗೆ ಬಹಿಷ್ಕಾರ; ಯಾವ ಧರ್ಮ ಗ್ರಂಥವೂ ಇದನ್ನ ಒಪ್ಪುವುದಿಲ್ಲ; ಪೇಜಾವರ ಶ್ರೀ

ಮಾಲೂರಿನಲ್ಲಿ ದೇವರ ಉತ್ಸವದ ವೇಳೆ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಬಹಿಷ್ಕಾರ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮೀಜಿ ಈ ಘಟನೆಯನ್ನು ಕೇಳಿ ನಮಗೆ ಬಹಳ ಖೇದವಾಗಿದೆ. ಧರ್ಮ ಗ್ರಂಥಗಳು ಇಂತಹ ಬೆಳವಣಿಗೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಉತ್ಸವ ಇಡೀ ಊರಿಗೆ ಸಂಬಂಧಿಸಿದ ಕಾರ್ಯಕ್ರಮವಾಗಿದ್ದು, ಬಹಿಷ್ಕಾರ, ಶಿಕ್ಷೆ, ದಂಡವನ್ನು ಯಾವ ಧರ್ಮ ಗ್ರಂಥವೂ ಒಪ್ಪುವುದಿಲ್ಲ. ಹಿಂದೂ ಸಂಘಟನೆಗಳು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುತ್ತಿವೆ. ಸರಕಾರ ಕೂಡ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದ್ದಾರೆ.

ತಪ್ಪು ಮಾಡಿದವರನ್ನು ಶಿಕ್ಷಿಸಿದರೆ ಸಾಲದು, ಜಾಗೃತ ಕಾರ್ಯಕ್ರಮ ಆಗಬೇಕು. ಸಮಾಜ ಮತ್ತು ಧರ್ಮ ಒಪ್ಪದ ಚಟುವಟಿಕೆಗಳಿಗೆ ಯಾರೂ ಇಳಿಯಬಾರದು ಎಂದು ಹೇಳಿದ್ದಾರೆ.

Edited By :
PublicNext

PublicNext

22/09/2022 12:36 pm

Cinque Terre

28.7 K

Cinque Terre

2

ಸಂಬಂಧಿತ ಸುದ್ದಿ