ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಹಾಗೂ ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫ್‌ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಗುರುವಾರ ದಿಢೀರ್ ರಸ್ತೆ ತಡೆ ನಡೆಸಿದರು.
ಯಾವುದೇ ರೀತಿಯಲ್ಲಿ ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್‌ಐ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ವೃತ್ತ ನಿರೀಕ್ಷೆ ಕೆ.ಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀ ಶೈಲ ಮುರಗೋಡ ನೇತೃತ್ವದಲ್ಲಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.
PublicNext
22/09/2022 05:20 pm