ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಸೆಪ್ಟಂಬರ್ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ನವರಾತ್ರಿ ಉತ್ಸವ "ಉಚ್ಚಿಲ ದಸರಾ ಉತ್ಸವ-2022"ಕ್ಕೆ ಉಡುಪಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶ್ರೀತೇಜ ಕೂರ್ಮಾ ರಾವ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಾಣವಾದ ಶ್ರೀಮತಿ ಶಾಲಿನಿ ಡಾ. ನಾಡೋಜ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದ ಮಾತೆಯ ವಿಗ್ರಹಗಳ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾ ಉತ್ಸವ ಸಂಪನ್ನಗೊಂಡಿತು. ಬೆಳಿಗ್ಗೆ ನವದುರ್ಗೆಯರು ಮತ್ತು ಶಾರದಾ ದೇವಿಯ ಪ್ರತಿಷ್ಠಾಪನಾ ಕಾರ್ಯಕ್ರಮ ನೂತನ ಸಭಾಂಗಣದಲ್ಲಿ ನೆರವೇರಿತು.
ದೇವಳದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಏಕ ಕಾಲದಲ್ಲಿ ನವದುರ್ಗೆಯರು ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆ ನಡೆಯಿತು. ಈ ಸಂದರ್ಭ ಮೊಗವೀರ ಮುಖಂಡ ನಾಡೋಜಾ ಜಿ ಶಂಕರ್, ಕಾಪು ಶಾಸಕ ಲಾಲಾಜಿ ಮೆಂಡನ್ ಸಹಿತ ನೂರಾರು ಭಕ್ತರು ದೇವರ ದರ್ಶನ ಪಡೆದರು.
PublicNext
27/09/2022 02:02 pm