ಪ್ರವಾಸಿಗರ ಹಾಟ್ ಸ್ಪಾಟ್ ಮಲ್ಪೆಯ ಸೈಂಟ್ ಮೇರಿಸ್ ದ್ವೀಪ ಇನ್ನೇನು ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ. ದ್ವೀಪದ ಅಭಿವೃದ್ಧಿ, ಇಲ್ಲಿಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ದ್ವೀಪದ ಸ್ವಚ್ಛತೆ ತುಂಬ ಮುಖ್ಯ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಕೆ. ರಘುಪತಿ ಭಟ್ ಸೈಂಟ್ ಮೇರಿಸ್ ದ್ವೀಪಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಪ್ರಭಾರ ಮಲ್ಪೆ ಪೋಲಿಸ್ ವೃತ್ತ ನಿರೀಕ್ಷಕ ಮಂಜುನಾಥ್, ಪೋಲಿಸ್ ಉಪ ನಿರೀಕ್ಷಕ ಶಕ್ತಿವೇಲು, ಸ್ಥಳೀಯರಾದ ಮಂಜು ಕೊಳ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯವರು ಶಾಸಕರ ಜೊತೆಗಿದ್ದರು.
PublicNext
27/09/2022 02:25 pm