ಕಿತ್ತೂರು ರಾಣಿ ಚನ್ನಮ್ಮ ಜಯಂತಿಗಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ವೀರ ಜ್ಯೋತಿ ರಥ ಯಾತ್ರೆಯು ಇವತ್ತು ಉಡುಪಿ ತಲುಪಿದೆ. ರಥದ ಸ್ವಾಗತ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಅಜ್ಜರಕಾಡು ಬಳಿಯ ಜೋಡುರಸ್ತೆಯಲ್ಲಿ ನಡೆಯಿತು.ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜ್ಯೋತಿ ಗೆ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಹಿತ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಇದೇ ತಿಂಗಳ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದರು. ಯಾತ್ರೆಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ.
PublicNext
06/10/2022 03:16 pm