ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಾರಗಿರಿ ದೇವಸ್ಥಾನದ ಬಳಿ ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕ ಶೌಚಾಲಯವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯ ಸರಕಾರದ ಮೂಲಕ ನಿರಂತರವಾಗಿ ನಡೆಯಲಿದೆ ಎಂದರು.
ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯ ಜಯಕುಮಾರ್, ಮುಲ್ಕಿ ನ.ಪಂ ನ ಮಾಜಿ ಅಧ್ಯಕ್ಷ ಸುನೀಲ್ ಆಳ್ವ, ಮಹಿಳಾ ಮಂಡಳಿಯ ಅಧ್ಯಕ್ಷೆ ಪುಷ್ಪ ಮಡಿವಾಳ್ತಿ, ಸದಸ್ಯರು, ಕುಂಜಾರಗಿರಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಕಾಂತ್ ಭಟ್, ಗಂಗಾಧರ್ ಶೆಟ್ಟಿ, ರಂಗನಾಥ್ ಶೆಟ್ಟಿ, ಸುಧಾಕರ ಶೆಟ್ಟಿ,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
08/10/2022 08:19 am