ಕಾರ್ಕಳ : ತಾಲೂಕಿನ ಮಿಯ್ಯಾರು ನೆಲ್ಲಿಗುಡ್ಡೆ ಪರಿಸರದಲ್ಲಿ ನಿರ್ಮಾಣವಾಗುತ್ತಿರುವ ಗೇರುಬೀಜ ಸಿಪ್ಪೆಯಿಂದ ಎಣ್ಣೆ ತೆಗೆಯುವ ರಾಸಾಯನಿಕ ಕಾರ್ಖಾನೆಯಿಂದಾಗುವ ತೊಂದರೆಗಳ ಬಗ್ಗೆ ಜನರ ಸಮಸ್ಯೆ ಆಲಿಸಲು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿಗಾಗಿ ಕಾರ್ಖಾನೆಗಳು ಬೇಕು. ಆದರೆ ಅದರಿಂದ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗುತ್ತಿದ್ದರೆ ತಕ್ಷಣವೇ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಿಯ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರೀಶ್ ಅಮೀನ್, ಜಿಲ್ಲಾಪಂಚಾಯತ್ ನಿಕಟಪೂರ್ವ ಸದಸ್ಯರಾದ ದಿವ್ಯಶ್ರೀ ಜಿ ಅಮೀನ್, ನಲ್ಲೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಪೂಜಾರಿ, ಮಿಯ್ಯಾರು ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಪ್ರಕಾಶ್ ಬಲಿಪ, ಜೆರಾಲ್ಡ್ ಡಿಸಿಲ್ವ, ನಲ್ಲೂರು ಗ್ರಾಮ ಪಂಚಾಯತ್ ನಿಕಟಪೂರ್ವ ಸದಾಸ್ಯರಾದ ಸುಕುಮಾರ್ ಶೆಟ್ಟಿ, ನೆಲ್ಲಿಗುಡ್ಡೆ ಪರಿಸರ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
Kshetra Samachara
08/10/2022 02:35 pm