ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಸಡಗರದಿಂದ ಆಚರಿಸಲಾಗುತ್ತಿದೆ.ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ನವರಾತ್ರಿ ಮಹೋತ್ಸವದ ಪ್ರಯುಕ್ತ 9 ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತಿದೆ. ನಿನ್ನೆ ರಾತ್ರಿ ದೇವರಿಗೆ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವ ನಡೆಯಿತು. ಕೋವಿಡ್ ಕಾರಣದಿಂದಾಗಿ ಈ ಬಾರಿಯ ನವರಾತ್ರಿ ಸರಳವಾಗಿ ನಡೆಯುತ್ತಿದೆ. ಸರಕಾರದ ಅದೇಶದ ಅನ್ವಯ ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿ ಮಂಗಳಾಂಬೆಯ ದರ್ಶನ ಪಡೆಯುತ್ತಿದ್ದಾರೆ.
Kshetra Samachara
20/10/2020 03:22 pm