ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ನವರಾತ್ರಿ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಗಳೂರಿನ ಕುದ್ರೋಳಿ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಮಹೊತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆಗಳು ನಡೆಯುತ್ತಿದೆ. ಏಳನೇ ಪೂಜೆಯ ದಿನ ನಿಮಿತ್ತ ದೇವರ ಬಲಿ ಉತ್ಸವ ಹಾಗೂ ಪಲ್ಲಕ್ಕಿ ಸೇವೆ ನಡೆಯಿತು. ಭಕ್ತರು ಶ್ರದ್ಧೆ, ಭಕ್ತಿಯಿಂದ ಭಗವತೀ ಅಮ್ಮನವರ ಪಲ್ಲಕ್ಕಿ ಉತ್ಸವ ಕಣ್ತುಂಬಿಕೊಂಡರು.
Kshetra Samachara
24/10/2020 05:48 pm