ಉಡುಪಿ: ಕೃಷ್ಣಮಠದಲ್ಲಿ ಇಂದು ಮುಂಜಾನೆ ಪರ್ಯಾಯ ಶ್ರೀಗಳು ಪಶ್ಚಿಮ ಜಾಗರ ಪೂಜೆ ನೆರವೇರಿಸಿದರು. ಸೂರ್ಯೋದಯಕ್ಕೂ ಮುನ್ನ ನಡೆಯುವ ಪಶ್ಚಿಮ ಜಾಗರ ಪೂಜೆ ಆಶ್ವಯುಜ ಮಾಸದ ಶುಕ್ಷಪಕ್ಷದ ಏಕಾದಶಿ ದಿನವಾದ ಇಂದು ಆರಂಭಗೊಂಡಿತು.
ಆಷಾಢಶುದ್ಧ ಏಕಾದಶಿಯಿಂದ ಭಗವಂತಯೋಗನಿದ್ರೆಯಲ್ಲಿದ್ದಾನೆಂಬ ನಂಬಿಕೆ ಇದೆ. ಈ ಒಂದು ತಿಂಗಳು ಬೆಳಗ್ಗೆ ವಾದ್ಯಘೋಷ, ಬಳಿಕ ಪಶ್ಚಿಮಜಾಗರ ಪೂಜೆ ನಡೆಯುತ್ತದೆ. ಯೋಗನಿದ್ರೆಯಿಂದ ಭಗವಂತನನ್ನು ಎಚ್ಚರಿಸಲು ಭಕ್ತರು ಮಾಡುವ ಸೇವೆ ಇದು.
ಕೃಷ್ಣನಿಗೆ ನಿತ್ಯ 14 ಬಗೆಯ ಪೂಜೆಗಳೊಂದಿಗೆ ಇಂದಿನಿಂದ ಪಶ್ಚಿಮ ಜಾಗರ ಪೂಜೆ ಸೇರ್ಪಡೆಗೊಂಡಿದ್ದು, ಇನ್ನು ಒಂದು ತಿಂಗಳು ನಿತ್ಯ 15 ಪೂಜೆ ನಡೆದು ಉತ್ಥಾನ ದ್ವಾದಶಿಯಂದು ಸಂಪನ್ನಗೊಳ್ಳಲಿದೆ.ಬೆಳಗ್ಗೆ ನಿರ್ಮಾಲ್ಯ, ಉಷಃಕಾಲ, ಅಕ್ಷಯಪಾತ್ರೆ ಪೂಜೆ, ಪಂಚಾಮೃತ ಅಭಿಷೇಕದ ಬಳಿಕ ಪಶ್ಚಿಮ ಜಾಗರ ಪೂಜೆ ನಡೆಯಲಿದೆ.
Kshetra Samachara
27/10/2020 12:07 pm