ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಮೇಲ್ಕಾರ್ ಸಮೀಪ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಡಳಿತಾಧಿಕಾರಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಉಪಸ್ಥಿತಿಯಲ್ಲಿ ನಾಗತಂಬಿಲ ಸೇವೆ ನಡೆಯಿತು. ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಉಪತಹಸೀಲ್ದಾರ್ ರವಿಶಂಕರ್, ಕಂದಾಯ ಇಲಾಖೆ ನಿರೀಕ್ಷಕ ರಾಮ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ವರ್ಷಾವಧಿ ಕೋಲ ಉತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ ಫಲ ಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ಕಲ್ಪೋಕ್ತ ಪೂಜೆ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.
Kshetra Samachara
25/11/2020 03:03 pm