ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನ ವಿಜಯೋತ್ಸವ; ಧಾರ್ಮಿಕ ಸಭೆ

ಬಂಟ್ವಾಳ: ಹಿಂದು ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಭಾನುವಾರ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವ ಅಂಗವಾಗಿ ನಡೆಯಿತು.

ಬೆಳಗ್ಗೆ 9ರಿಂದ 10ರ ವರೆಗೆ ನವೋದಯ ಮಿತ್ರ ಕಲಾವೃಂದ ನೆತ್ತರಕೆರೆ ಹಾಗೂ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇವರಿಂದ ಭಜನೆ ನಡೆಯಿತು.

ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭ ಶ್ರೀ ಮಹಾಲಕ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಅಯೋಧ್ಯೆ ರಾಮಮಂದಿರ ಸಂಪೂರ್ಣಗೊಳ್ಳುವವರೆಗೆ ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿದರು. ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಮತ್ತಿತರರು ಉಪಸ್ಥಿತರಿದ್ದರು. ಜಗದೀಶ ಕಡೆಗೋಳಿ ನಿರೂಪಿಸಿದರು. ಸುರೇಶ್ ಬಿ.ಸಿ.ರೋಡ್ ಸ್ವಾಗತಿಸಿದರು. ಧರ್ಮೇಶ್ ಬಂಟ್ವಾಳ ವಂದಿಸಿದರು.

Edited By : Nagaraj Tulugeri
Kshetra Samachara

Kshetra Samachara

06/12/2020 06:15 pm

Cinque Terre

12.51 K

Cinque Terre

0

ಸಂಬಂಧಿತ ಸುದ್ದಿ