ಉಡುಪಿ: ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆದ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಕಂಚಿ ಶ್ರೀಗಳನ್ನು ಭೇಟಿಯಾಗಿ ರಾಮಮಂದಿರ ನಿರ್ಮಾಣಕ್ಕೆ ಸಹಕಾರ ಯಾಚಿಸಿದರು.
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ನಿನ್ನೆ ಸಂಜೆ ಕಂಚಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ಕಂಚಿ ಶ್ರೀ ವಿಜಯೇಂದ್ರ ಸರಸ್ವತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು.ಈ ಸಂದರ್ಭ ಉಭಯ ಸ್ವಾಮೀಜಿಗಳು ವಿಶೇಷವಾಗಿ ಮಂದಿರ ನಿರ್ಮಾಣ,ಅದಕ್ಕೆ ಮಾಡಬೇಕಾದ ಧನಸಂಗ್ರಹ ಅಭಿಯಾನದ ಕುರಿತು ಮಾತುಕತೆ ನಡೆಸಿದರು.
ಕಂಚಿ ಶ್ರೀಗಳು ಪೇಜಾವರ ಶ್ರೀಗಳನ್ನು ಸಾಂಪ್ರದಾಯಿಕ ಗೌರವಗಳ ಸಹಿತ ಆತ್ಮೀಯವಾಗಿ ಮಾಡಿಕೊಂಡರು .ಶ್ರೀ ಗಳ ಭೇಟಿ ಗೆ ಅತೀವ ಸಂತಸ ವ್ಯಕ್ತಪಡಿಸಿ ಉಭಯ ಮಠಗಳೊಂದಿಗೆ ಮತ್ತು ವಿಶೇಷವಾಗಿ ಎರಡೂ ಮಠಗಳ ಹಿಂದಿನ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮತ್ತು ಶ್ರೀ ಜಯೇಂದ್ರ ಸರಸ್ವತೀ ಸ್ವಾಮೀಜಿಯವರ ಬಾಂಧವ್ಯವನ್ನು ಸ್ಮರಿಸಿಕೊಂಡರು.
ಪೇಜಾವರ ಶ್ರೀಗಳೂ ಕಂಚಿ ಶ್ರೀಗಳಿಗೆ ಶಾಲು ಫಲ ಪುಷ್ಪ ಅರ್ಪಿಸಿ ಗೌರವಿಸಿದರು. ಇದಕ್ಕೂ ಮೊದಲು ಪೇಜಾವರ ಶ್ರೀಗಳು ಶಿಷ್ಯರ ಸಹಿತ ವರದರಾಜಸ್ವಾಮಿ , ಕಾಮಾಕ್ಷಿ ದೇವಿಯ ದರ್ಶನ ಪಡೆದು ಲೋಕದ ಒಳಿತಿಗೆ ಮತ್ತು ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನತಾ ಸಿದ್ಧಿಗಾಗಿ ಪ್ರಾರ್ಥಿಸಿದರು.
Kshetra Samachara
10/12/2020 10:19 am