ಸುಬ್ರಹ್ಮಣ್ಯ: ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ದೇವಾಲಯ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.
ಇಂದು ರಾತ್ರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ನಂತರ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಬಂಡಿ ಉತ್ಸವ ಹಾಗೂ ಪಲ್ಲಕ್ಕಿ ಉತ್ಸವ ಜರುಗಿತು.
ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ದೇವರ ಉತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
Kshetra Samachara
19/12/2020 10:36 pm