ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯನಿಗೆ ಅವಭೃತೋತ್ಸವ; ಪುಣ್ಯಜಲ ಜಳಕದಲ್ಲಿ ಪುಳಕಗೊಂಡ ಭಕ್ತಜನ ಮಾನಸ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವರಿಗೆ ಪುಣ್ಯ ತೀರ್ಥ ಕುಮಾರಧಾರದ ಜಳಕದ ಗುಂಡಿಯಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ಪ್ರಧಾನ ಅರ್ಚಕರು ಅವಭೃತೋತ್ಸವ ನೆರವೇರಿಸಿದರು.

ನಂತರದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಇಂದು ಬೆಳಗ್ಗೆ ಪುಣ್ಯನದಿ ಕುಮಾರಧಾರಾದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆಯಿತು. ಸಹಸ್ರಾರು ಭಕ್ತರು ಉತ್ಸವ ವೀಕ್ಷಿಸಿದರು.

ಇಂದು ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ಜರುಗಿತು. ಬಳಿಕ ದೇವರಿಗೆ ಓಕುಳಿ ಸಮರ್ಪಣೆಯಾಗಿ ಭಕ್ತಾದಿಗಳಿಗೆ ಓಕುಳಿ ಪ್ರೋಕ್ಷಣೆ ನಡೆಯಿತು. ನಂತರ ಶ್ರೀ ದೇವರ ಅವಭೃತೋತ್ಸವ ಸವಾರಿ ದೇವಳದಿಂದ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.

ಕುಮಾರಧಾರ ನದಿಯ ಮತ್ಸ್ಯತೀರ್ಥದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆಯಿತು. ಸಿಂಗರಿಸಲ್ಪಟ್ಟ ಅವಳಿ ದೋಣಿಗಳನ್ನು ಒಂದಾಗಿಸಿ ಅಚ್ಚುಕಟ್ಟಾಗಿ ನಿರ್ಮಿತವಾದ ತೆಪ್ಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ನೌಕಾ ವಿಹಾರ ನೆರವೇರಿತು. ತದನಂತರ ಕುಮಾರಧಾರದ ಮತ್ಸ್ಯತೀರ್ಥದ ದೇವರ ಜಳಕದ ಗುಂಡಿಯಲ್ಲಿ ಅವಭೃತೋತ್ಸವ ನಡೆಯಿತು. ಜಳಕದ ಧಾರ್ಮಿಕ ವಿಧಿವಿಧಾನವನ್ನು ಪ್ರಧಾನ ಅರ್ಚಕ ವೇ.ಮೂ. ಸೀತಾರಾಮ ಎಡಪಡಿತ್ತಾಯ ನೆರವೇರಿಸಿದರು. ಅರ್ಚಕರ ಮಂತ್ರ ಘೋಷದ ನಡುವೆ ಪ್ರಧಾನ ಅರ್ಚಕರು ಕುಮಾರಧಾರ ಪುಣ್ಯ ತೀರ್ಥವನ್ನು ಶಂಖದಲ್ಲಿ ದೇವರಿಗೆ ಸಮರ್ಪಿಸಿದರು. ಬಳಿಕ ಸೀಯಾಳಾಭಿಷೇಕ ಸಹಿತ ವೈದಿಕ ವಿಧಿವಿಧಾನ ನಡೆಯಿತು. ನಂತರ ಕುಮಾರಧಾರ ಪುಣ್ಯತೀರ್ಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಜಳಕ ನೆರವೇರಿತು. ಜಳಕದ ಬಳಿಕ ಕುಮಾರಧಾರ ನದಿ ತೀರದ ಅವಭೃತಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

21/12/2020 09:48 pm

Cinque Terre

10.97 K

Cinque Terre

0

ಸಂಬಂಧಿತ ಸುದ್ದಿ