ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀ ಕೃಷ್ಣ ಮಠ ಮುಕ್ತ ಮುಕ್ತ.. : ಮೊದಲ ದಿನವೇ ಹರಿದು ಬಂತು ಹರಿಭಕ್ತ ಸಾಗರ

ಉಡುಪಿ: ಕಳೆದ ಆರು ತಿಂಗಳಿನಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ಶ್ರೀ ಕೃಷ್ಣಮಠಕ್ಕೆ ಇಂದಿನಿಂದ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವೇ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು, ದೇವರ ದರ್ಶನ ಮಾಡಿದರು.

ಸದ್ಯ ಕ್ಕೆ ಮಧ್ಯಾಹ್ನ ಎರಡು ಗಂಟೆಯಿಂದ ಐದರ ತನಕ ಮಾತ್ರ ದೇವರ ದರ್ಶನ‌ಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಸಾಕಷ್ಟು ಮುಂಜಾಗರೂಕತೆಗಳನ್ನೂ ತೆಗೆದುಕೊಂಡಿದ್ದು, ಭಕ್ತರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಒಳಪ್ರವೇಶಿಸುವ ಭಕ್ತರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು,ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸರತಿ ಸಾಲು ನಿಲ್ಲುವಾಗಲೂ ಸಾಮಾಜಿಕ ಅಂತರ ಕಾಪಾಡುವಂತೆ ಮಠದ ಸಿಬ್ಬಂದಿ ಭಕ್ತರಲ್ಲಿ ಮನವಿ ಮಾಡುತ್ತಿದ್ದಾರೆ.

ಅಂದಹಾಗೆ ಇಂದು ಯಾವುದೇ ಸೇವೆಗಳಿಗೂ ಅವಕಾಶ ಇರಲಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇತ್ತು. ರಾಜಾಂಗಣ ಹಿಂಭಾಗದಿಂದ ಮಠಕ್ಕೆ ಪ್ರವೇಶಿಸಲು ವ್ಯವಸ್ಥೆ ಮಾಡಲಾಗಿದ್ದು ,ಭಕ್ತರು ಕೋವಿಡ್ ಸಂದರ್ಭ ಪಾಲಿಸಬೇಕಾದ ಅಗತ್ಯ ಮುಂಜಾಗರೂಕತಾ ಕ್ರಮಗಳ ಬಗ್ಗೆಯೂ ಕೃಷ್ಣಮಠದ ಆಸುಪಾಸಿನಲ್ಲಿ ಬ್ಯಾನರ್ ,ಭಿತ್ತಿಪತ್ರಗಳ ಮೂಲಕ ಮಾಹಿತಿ ನೀಡಲಾಗಿದೆ.

Edited By : Nagesh Gaonkar
Kshetra Samachara

Kshetra Samachara

28/09/2020 06:18 pm

Cinque Terre

22.31 K

Cinque Terre

1

ಸಂಬಂಧಿತ ಸುದ್ದಿ