ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಲಕ್ಷ ದೇಣಿಗೆ ನೀಡಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಶೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಲಕ್ಷ ದೇಣಿಗೆ ನೀಡೋದಾಗಿ ಘೋಷಿಸಲಾಗಿದೆ. ರಾಮ ಮಂದಿರವು ಶತಮಾನದ ವಿಸ್ಮಯವಾಗಿ ಅದ್ಭುತ ಮಂದಿರವಾಗಿ ಮೂಡಿಬರಲಿ ಎಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉಲ್ಲೇಖಿಸಿದ್ದಾರೆ.
Kshetra Samachara
14/01/2021 12:42 pm