ಬಂಟ್ವಾಳ: ಬಂಟ್ವಾಳ ತಾಲೂಕಿನ ಬೊಳ್ಮಾರು ನೆಲ್ಲಿಗುಡ್ಡೆಯಲ್ಲಿರುವ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ಅಮ್ಮನವರು ಮತ್ತು ಸಹಪಾರಿವಾರ ದೈವಗಳ ಹಾಗೂ ನಾಗದೇವರ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಿತು.ಈ ಸಂದರ್ಭ ಹಲವು ಗಣ್ಯರು ಕ್ಷೇತ್ರಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಮಂಗಳವಾರ ರಾತ್ರಿ ದ.ಕ.ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸ್ಥಳೀಯ ಸದಸ್ಯರಾದ ಪದ್ಮಶೇಖರ್ ಜೈನ್ ಬುಲ್ಲೋಡಿಗುತ್ತು,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬೇಬಿ ಕುಂದರ್, ಕಕ್ಕೆಪದವು ಗರಡಿ ಕ್ಷೇತ್ರದ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ತುಳು ಚಿತ್ರರಂಗದ ಹಿರಿಯರೂ ನಾಟಕ ರಂಗದ ಪ್ರಮುಖರೂ ಆಗಿರುವ ನಟ, ನಿರ್ದೇಶಕ, ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲಬೈಲು, ಪ್ರಮುಖರಾದ ಬಿ ಆರ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು. ಬಂದ ಎಲ್ಲ ಭಕ್ತರು, ಗಣ್ಯರನ್ನು ಗೌರವಿಸಿ, ಪ್ರಸಾದ ನೀಡಿ ಹರಸಲಾಯಿತು.
Kshetra Samachara
17/02/2021 01:02 pm