ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಮಂತೂರು: ಲಕ್ಷ ತುಳಸಿ ಅರ್ಚನೆ ಗೆ ಭರದ ಸಿದ್ಧತೆ

ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಸೋಮವಾರ (ಆಗಸ್ಟ್ 16)ವೇದಮೂರ್ತಿ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಸಾವಿರಾರು ಭಕ್ತಾದಿಗಳು ತುಳಸಿ ದಳವನ್ನು ದೇವಳಕ್ಕೆ ಅರ್ಪಿಸಿದ್ದು ವ್ಯವಸ್ಥಿತವಾಗಿ ದೇವಸ್ಥಾನದ ಹೊರಗಿನ ಮಂಟಪದಲ್ಲಿ ಇರಿಸಲಾಗಿದೆ. ಲಕ್ಷ ತುಳಸಿ ಅರ್ಚನೆ ನಿಮಿತ್ತ ದೇವಸ್ಥಾನವನ್ನು ಪುಷ್ಪಾಲಂಕಾರದಿಂದ ಸಿಂಗರಿಸಲಾಗಿದೆ.

ಸೋಮವಾರ ಬೆಳಿಗ್ಗೆ ಎಂಟು ಗಂಟೆಗೆ ಸಿಂಹ ಸಂಕ್ರಮಣದ ಶುಭದಿನದಂದು ಶ್ರೀ ಆದಿ ಜನಾರ್ದನ ದೇವರಿಗೆ ವಿಶೇಷ ಗಂಟೆಗೆಪ್ರಾರ್ಥನೆಯೊಂದಿಗೆ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ಗೆ ನಡೆಯಲಿರುವುದು

ಸರಕಾರದ ಆದೇಶದಂತೆ ದೇವಳಕ್ಕೆ ಬರುವ ಭಕ್ತರು ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ಪಬ್ಲಿಕ್ ನೆಕ್ಸ್ಟ್ ಮೂಲಕ ಭಕ್ತರಿಗೆ ಮನವಿ ಮಾಡಿದ್ದಾರೆ.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಹಾಗೂ ಉದಯ ಶೆಟ್ಟಿ ಆದಿಧನ್ ಮುಲ್ಕಿ ಶಿಮಂತೂರು ಯುವಕ ಮಂಡಲ ಹಾಗೂ ಮಹಿಳಾ ಭಜನಾ ಮಂಡಳಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ಪೂರ್ವ ಸಿದ್ಧತಾ ಸಭೆಗಳನ್ನು ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

15/08/2021 10:04 pm

Cinque Terre

31.04 K

Cinque Terre

0

ಸಂಬಂಧಿತ ಸುದ್ದಿ