ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಸೋಮವಾರ ವೇದಮೂರ್ತಿ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕರಾದ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಶೇಷ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಿತು.
ಸೋಮವಾರ ಸಿಂಹ ಸಂಕ್ರಮಣದ ಶುಭ ದಿನದಂದು ಬೆಳಗ್ಗೆ 8 ಗಂಟೆಗೆ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಪೂಜಾಕೈಂಕರ್ಯ ಗಳಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳು ಆಶೀರ್ವಚನ ನೀಡಿ ಭಕ್ತಜನರ ದುರಿತ ನಿವಾರಣಾ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ಲಕ್ಷ ತುಳಸಿ ಅರ್ಚನೆ ನಡೆಸಲಾಗಿದ್ದು ಲೋಕಕ್ಕೆ ಬಂದಿರುವ ಕೊರೊನಾ ಮಹಾಮಾರಿಯ ಕಂಟಕ ದೂರವಾಗಿ ಶಾಂತಿ ನೆಲೆಸಲಿ ಎಂದರು
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಗುರುಪ್ರಸಾದ್ ಭಟ್,ಉದ್ಯಮಿ ಪ್ರಸಾದ್ ಶೆಟ್ಟಿ ಮುಂಡ್ಕೂರು ಅಂಗಡಿ ಗುತ್ತು, ಶೇಖರ ಶೆಟ್ಟಿ ಕಿಲ್ಪಾಡಿ ಬಂಡಸಾಲೆ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮತ್ತಿತರರು ಉಪಸ್ಥಿತರಿದ್ದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ ಹಾಗೂ ಶಿಮಂತೂರು, ಶ್ರೀ ಆದಿ ಜನಾರ್ದನ ಸೇವಾ ಯುವಕ ಮಂಡಲ ,ಮಹಿಳಾ ಭಜನಾ ಮಂಡಳಿ ಸದಸ್ಯರು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಯುವಂತೆ ನೇತೃತ್ವ ವಹಿಸಿದ್ದರು.
Kshetra Samachara
16/08/2021 05:46 pm