ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಆಗಸ್ಟ್ 30 ರವರೆಗೆ ಸೇವೆಗಳಿಗೆ ನಿರ್ಬಂಧ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕ ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮಾನ್ಯ ದ.ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.

ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ದ.ಕ ಜಿಲ್ಲಾಧಿಕಾರಿಗಳ ಆದೇಶದಂತೆ ಈ ಆದೇಶ ಹೊರಡಿಸಲಾಗಿದೆ.ಅಗಸ್ಟ್ 30 ವರೇಗೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಬೆಳಗ್ಗೆ 7:00ರಿಂದ ಮಧ್ಯಾಹ್ನ 11:30 ತನಕ, ಮಧ್ಯಾಹ್ನ 12:15-1:30 ಹಾಗೂ 2:30ರಿಂದ ರಿಂದ ಸಂಜೆ 7:00 ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ.ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

19/08/2021 09:49 am

Cinque Terre

7.62 K

Cinque Terre

0

ಸಂಬಂಧಿತ ಸುದ್ದಿ