ಮುಲ್ಕಿ: ಮುಲ್ಕಿಯ ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಋಗುಪಾಕರ್ಮ ಆಚರಣೆ ದೇವಸ್ಥಾನದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಅರ್ಚಕ ಶ್ರೀಪತಿ ಉಪಾಧ್ಯಾಯ ಮಾತನಾಡಿ
ಉಪಕರ್ಮದ ದಿನ ಅಭ್ಯಂಜನ ಮಾಡಿ, ಪುಣ್ಯಾಹ, ನಾಂದಿ ನಂತರ ಉತ್ಸರ್ಜನ ಹೋಮ ಮಾಡಿ, ಗುರು(ಋಷಿ) ಕಾಣಿಕೆ ನೀಡಿ ಜನಿವಾರ ಅರ್ಥಾತ್ ಯಜ್ಞೋಪವೀತ ಧಾರಣೆಯನ್ನು ಮಾಡಿಕೊಳ್ಳುವುದು ಸಂಪ್ರದಾಯ.
ಉತ್ಸರ್ಜನ ಎಂದರೆ, ದೇಹ ಶುದ್ಧಿ. ಅಂದರೆ ದೇಹ ಶುದ್ಧಿಗಾಗಿ ಮಾಡುವ ಹೋಮ ಉತ್ಸರ್ಜನ. ಈ ಹೋಮ ಅಥವಾ ಯಾಗ ಮಾಡುವುದರಿಂದ ವರ್ಷವಿಡೀ ಮಾಡಿದ ಗಾಯಿತ್ರಿ ಮಂತ್ರ ಜಪ, ಪೂಜೆ, ಸಂಧ್ಯಾವಂದನೆಗೆ ಬಲ ಬರುತ್ತದೆ ಎಂದರು.
ಈ ಸಂದರ್ಭ ಗೋಪಾಲಕೃಷ್ಣ ಭಟ್ ಬಪ್ಪನಾಡು, ಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
21/08/2021 09:01 pm