ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ ಜಿಲ್ಲೆಯಲ್ಲಿ ದೇವಾಲಯಗಳ ನಿರ್ಬಂಧ ಸಡಿಲಿಕೆ

ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ದ.ಕ.ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಮುಖ ದೇವಸ್ಥಾನಗಳು ವಾರಾಂತ್ಯಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭ ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ದೇವರ ದರ್ಶನ ಪಡೆಯಬಹುದು. ಅಲ್ಲದೆ ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಸಮಯದಲ್ಲಿ ವಸತಿ ಗೃಹಗಳಲ್ಲಿ ತಂಗಲು ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ ವಾರಾಂತ್ಯ ದಿನಗಳಲ್ಲಿ ಎಲ್ಲಾ ರೀತಿಯ ಉತ್ಸವ / ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನು

ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ - 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

07/09/2021 08:51 pm

Cinque Terre

18.13 K

Cinque Terre

0

ಸಂಬಂಧಿತ ಸುದ್ದಿ