ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಕ್ಕೆಯಲ್ಲಿ ಗಾಯಕ ವಿಜಯ್ ಪ್ರಕಾಶ್ ಕುಟುಂಬ: ಶ್ರೀ ಸುಬ್ರಹ್ಮಣ್ಯ ದರ್ಶನ

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಪ್ರಖ್ಯಾತ ಗಾಯಕ ವಿಜಯ ಪ್ರಕಾಶ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.

ಗುರುವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ್ದ ವಿಜಯಪ್ರಕಾಶ್ ಅವರು ಶುಕ್ರವಾರ ಶ್ರೀ ದೇವರ ದರುಶನ ಪಡೆದು ಶೇಷ ಸೇವೆ ನೆರವೇರಿಸಿದರು. ಶ್ರೀ ದೇವಳದ ಅರ್ಚಕರು ಗಾಯಕರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಈ ಸಂದರ್ಭದಲ್ಲಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್,ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಸಿಬ್ಬಂದಿಗಳಾದ ಪ್ರಮೋದ್ ಕುಮಾರ್.ಎಸ್,

ಕೆ.ಎಂ.ಗೋಪಿನಾಥ್ ನಂಬೀಶ, ಹರೀಶ್ ಮುಂತಾದವರು ಈ ಸಮಯದಲ್ಲಿ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

25/09/2021 02:39 pm

Cinque Terre

3.83 K

Cinque Terre

0

ಸಂಬಂಧಿತ ಸುದ್ದಿ