ಉಡುಪಿ: ಶಿರೂರು ಮಠದ ಪೀಠಾಧಿಪತಿಯಾಗಿ ಸನ್ಯಾಸ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಇವತ್ತು ಕೃಷ್ಣಮಠದಲ್ಲಿ ಕೃಷ್ಣ ದೇವರ ವಿಗ್ರಹ ಸ್ಪರ್ಶಿಸಿ ಪೂಜೆ ಸಲ್ಲಿಸಿದ್ದಾರೆ. ಅಷ್ಟಮಠದ ಸಂಪ್ರದಾಯದಂತೆ ನೂತನ ಸನ್ಯಾಸಿಗಳು ಚಾತುರ್ಮಾಸ್ಯ ವೃತ ಸಮಾಪ್ತಿ ಬಳಿಕ ಪಟ್ಟದ ದೇವರು ಹಾಗೂ ಕೃಷ್ಣ ದೇವರನ್ನು ಪೂಜಿಸಲು ಅರ್ಹತೆ ಪಡೆಯುತ್ತಾರೆ
ಅದಮಾರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಮತ್ತು ಶ್ರೀ ಸೋದೆ ಮಠಾಧೀಶ ವಿಶ್ವವಲ್ಲಭತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.
Kshetra Samachara
08/10/2021 04:33 pm