ಉಡುಪಿ: ಶ್ರೀಕೃಷ್ಣಮಠಕ್ಕೆ ದರ್ಶನಕ್ಕೆ ಬಂದಿದ್ದ ವೃದ್ಧೆಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಠದ ಸಿಬ್ಬಂದಿ ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ವೃದ್ಧೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಧೆಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ತೆಂಕಪೇಟೆ ವೆಂಕಟೇಶ್ವರ ದೇವಸ್ಥಾನದ ಸಮೀಪ ವೃದ್ಧೆ ವಾಸವಾಗಿದ್ದಾರೆಂದು ಹೇಳಲಾಗಿದೆ. ಸಂಬಂಧಿಕರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
09/10/2021 07:33 pm