ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ನಂದಿಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ

ಮುಲ್ಕಿ: ಮುಲ್ಕಿ ಸಮೀಪದ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು.

ಗುರುವಾರ ಮಹಾನವಮಿ ಪ್ರಯುಕ್ತ ದೇವಸ್ಥಾನದಲ್ಲಿ ಚಂಡಿಕಾಯಾಗ,ವಾಹನ ಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.ಗುರುವಾರ ರಾತ್ರಿ 8 ಗಂಟೆಗೆ ರಂಗಪೂಜೆ, ಮಹಾಪೂಜೆ,ಪುಸ್ತಕ ಪೂಜೆ,ವಿಶೇಷ ಪ್ರಾರ್ಥನೆ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭ ಸ್ಥಳೀಯ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ದೇವಸ್ತಾನದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.ಶುಕ್ರವಾರ ವಿಜಯದಶಮಿ ಪ್ರಯುಕ್ತ ಅನೇಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

Edited By : Manjunath H D
Kshetra Samachara

Kshetra Samachara

14/10/2021 11:00 pm

Cinque Terre

17.17 K

Cinque Terre

1