ಉಡುಪಿ: ಜೀರ್ಣೋದ್ದಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ "ಯಾಗ ಶಾಲೆ"ಯ ಶಿಲಾನ್ಯಾಸ ಇಂದು ನೆರವೇರಿತು. ದೇವಸ್ಥಾನದ ವಠಾರದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು.ಶಿಲಾನ್ಯಾಸದಲ್ಲಿ ಪಾಲ್ಗೊಂಡ ಶಾಸಕ ಕೆ. ರಘುಪತಿ ಭಟ್ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ರವಿರಾಜ ವಿ. ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗೇಶ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
15/10/2021 01:02 pm