ಮಂಗಳೂರು: ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ವಿಹಿಂಪ ಮುಖಂಡರು ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿದ ಘಟನೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ವಿಶ್ವ ಹಿಂದೂ ಪರಿಷತ್ ಕಚೇರಿ ವಿಶ್ವ ಶ್ರೀಯಲ್ಲಿ ನಡೆದ ಆಯುಧ ಪೂಜೆಯ ಸಂದರ್ಭ ತ್ರಿಶೂಲ ಹಂಚಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಕಾರ್ಯಕ್ರಮದಲ್ಲಿ ಬಜರಂಗದಳ ನಾಯಕ ರಘು ಸಕಲೇಶಪುರ, ವಿಹಿಂಪ ನಾಯಕ ಶರಣ್ ಪಂಪ್‌ವೆಲ್ ಮತ್ತಿತರರು ಪಾಲ್ಗೊಂಡಿದ್ದರು.
Kshetra Samachara
15/10/2021 01:05 pm