ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬಲೀಂದ್ರ ಪೂಜೆ ಸಂಪನ್ನ

ಉಡುಪಿ: ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಬಲೀಂದ್ರ ಪೂಜೆ ಸಂಪನ್ನಗೊಂಡಿತು.

ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು "ಬಲೀಂದ್ರ ಪೂಜೆ"ಯನ್ನು ನೆರವೇರಿಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಪರ್ಯಾಯ ಅದಮಾರು ಮಠಕ್ಕೂ ದೀಪವನ್ನು ಪ್ರದರ್ಶಿಸಲಾಯಿತು.ಈ ವೇಳೆ ಅನೇಕ ಭಕ್ತರು ಹಾಜರಿದ್ದರು.

Edited By : Nagaraj Tulugeri
Kshetra Samachara

Kshetra Samachara

05/11/2021 09:49 am

Cinque Terre

19.52 K

Cinque Terre

0

ಸಂಬಂಧಿತ ಸುದ್ದಿ