ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ದೀಪಾವಳಿ ಆಚರಣೆ, ಶ್ರೀ ದೇವರ ಬಲಿ ಉತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು.
ದೇವಸ್ಥಾನದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ನಡೆದು, ಗೋ ಪೂಜೆ ನಡೆಯಿತು.
ರಾತ್ರಿ ದೇವಸ್ಥಾನದಲ್ಲಿ ರಂಗಪೂಜೆ ಬಳಿಕ ಬಲಿಯೇಂದ್ರ ಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ಜರುಗಿತು.
ಈ ಸಂದರ್ಭ ಸೀತಾರಾಮ್ ಭಟ್, ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶ್ರೀಪತಿ ಭಟ್, ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
05/11/2021 10:50 pm