ಉಡುಪಿ: ಶ್ರೀಕೃಷ್ಣಮಠದ ಮಧ್ವ ಸರೋವರದ ಮಧ್ಯ ಮಂಟಪದಲ್ಲಿ ಉತ್ಥಾನ ದ್ವಾದಶಿಯಂದು ವಿಶೇಷ ಪೂಜೆ ನಡೆದು ಕ್ಷೀರಾಬ್ದಿ ಅರ್ಘ್ಯ ನಡೆಯಿತು. ಪರ್ಯಾಯ ಶ್ರೀಪಾದರ ನೇತೃತ್ವದಲ್ಲಿ ಈ ವಿಶೇಷ ಪೂಜೆ ಮಧ್ವ ಸರೋವರದಲ್ಲಿ ನಡೆಯಿತು.ಈ ಸಂದರ್ಭ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
Kshetra Samachara
17/11/2021 07:04 pm