ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ; ಇಂದು ಸರ್ವಧರ್ಮ ಸಮ್ಮೇಳನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಒಟ್ಟು ಐದು ದಿನಗಳ ಈ ಮಹೋತ್ಸವದಲ್ಲಿ ಇಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವ ಧರ್ಮ ಸಮ್ಮೇಳನದ 89ನೇ ಅಧಿವೇಶನ ನಡೆಯಲಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮ್ಮೇಳನ ಉದ್ಘಾಟಿಸುವರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸ್ವಾಗತ ಭಾಷಣ ಮಾಡುವರು. ಬೆಂಗಳೂರಿನ ಎಸ್. ವ್ಯಾಸ ಯೋಗ ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಮಚಂದ್ರ ಜಿ. ಭಟ್ ಅಧ್ಯಕ್ಷತೆ ವಹಿಸುವರು.

ಸಾಗರದ ಸಾಹಿತಿ ಸಫ್ರಾಜ್ ಚಂದ್ರಗುತ್ತಿ, ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕಿ ಡಾ.ಎಂ.ಎಸ್.ಪದ್ಮ ಹಾಗೂ ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ.ಮೊರಾಸ್‌ ಧಾರ್ಮಿಕ ಉಪನ್ಯಾಸ ನೀಡುವರು. ಡಿ.3ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನ ಜರುಗಲಿದೆ.

Edited By : Manjunath H D
Kshetra Samachara

Kshetra Samachara

02/12/2021 02:08 pm

Cinque Terre

6.78 K

Cinque Terre

0

ಸಂಬಂಧಿತ ಸುದ್ದಿ