ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಶುಕ್ರವಾರ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಿತು.
ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಸಾಹಿತಿ ಡಾ. ಮಲ್ಲೇಪುರಂ ಜಿ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಡಾ. ಗಜಾನನ ಶರ್ಮ, ಕಿರುಚಿತ್ರ ನಿರ್ದೇಶಕ ಡಾ. ಪಿ. ಚಂದ್ರಿಕಾ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ವಿಶ್ರಾಂತ ನಿರ್ದೇಶಕ ಡಾ.ಕೆ.ಪಿ. ಪುತ್ತೂರಾಯ, ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಡಾ. ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/12/2021 10:27 am