ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ತೋಕೂರು ಷಷ್ಠಿ ಸಂಭ್ರಮದಲ್ಲಿ ರಥೋತ್ಸವ ಮೆರುಗು

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಷಷ್ಠಿ ಮಹೋತ್ಸವ ಪ್ರಯುಕ್ತ ರಥೋತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು.

ಪ್ರಾತಃಕಾಲ ದೇವಸ್ಥಾನದಲ್ಲಿ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು, ಮಹಾಪೂಜೆ ಜರುಗಿತು. ಮಧ್ಯಾಹ್ನ ರಥಾರೋಹಣ, ಪಲ್ಲಪೂಜೆ, ಅನ್ನ ಸಂತರ್ಪಣೆ ನಡೆಯಿತು.

ಕಟೀಲು ಕ್ಷೇತ್ರದ ಅರ್ಚಕ ವಾಸುದೇವ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿಕೃಷ್ಣ ಪುನರೂರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿದಾಸ್ ಭಟ್ ಉಪಸ್ಥಿತರಿದ್ದರು.

ಇಂದು ರಾತ್ರಿ ಬಯನ ಬಲಿ, ಭೂತಬಲಿ, ಶಯನ, ಕವಾಟ ಬಂಧನ ನಡೆಯಲಿದೆ.

ಶುಕ್ರವಾರ ಬೆಳಗ್ಗೆ ಕವಾಟೋದ್ಘಾಟನೆ,ತುಲಾಭಾರ ಸೇವೆ,ರಾತ್ರಿ ಬಲಿ, ಓಕುಳಿ, ರಥೋತ್ಸವ ಅವಭೃತ, ಜಳಕದ ಬಲಿ, ಧ್ವಜ ಅವರೋಹಣ, ಮಹಾಪೂಜೆ ನಡೆಯಲಿದೆ.

Edited By : Nagesh Gaonkar
Kshetra Samachara

Kshetra Samachara

09/12/2021 03:53 pm

Cinque Terre

8.36 K

Cinque Terre

0

ಸಂಬಂಧಿತ ಸುದ್ದಿ