ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪ್ರಸನ್ನತೆಗಾಗಿ ಹಾಗೂ ಪೂರ್ಣಾನುಗ್ರಹ ಪ್ರಾಪ್ತಿಗಾಗಿ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮ ಭಕ್ತಿ ಭಾವದಿಂದ ನಡೆಯಿತು
ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆದು ತುಳಸಿ ಅರ್ಚನೆ ಗೆ ಚಾಲನೆ ನೀಡಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.
ಈ ಸಂದರ್ಭ ದೇವಸ್ಥಾನದ ಅರ್ಚಕ ವೇದಮೂರ್ತಿ ಪದ್ಮನಾಭ ಭಟ್ ಮಾತನಾಡಿ ಲಕ್ಷ ತುಳಸಿ ಅರ್ಚನೆಯಿಂದ ಸರ್ವ ದುರಿತಗಳು ನಾಶವಾಗಿ ಶಾಂತಿ ನೆಲೆಸಲಿ ಎಂದು ಆಶೀರ್ವಚನ ನೀಡಿದರು.
ಈ ಸಂದರ್ಭ ದೇವಸ್ಥಾನದ ಅರ್ಚಕ ಸಿಬ್ಬಂದಿವರ್ಗ ಹಾಗೂ ಭಕ್ತರು ಉಪಸ್ಥಿತರಿದ್ದರು.
Kshetra Samachara
14/12/2021 02:15 pm