ಉಡುಪಿ: ಶ್ರೀಕೃಷ್ಣಮಠಕ್ಕೆ ಇವತ್ತು ಶ್ರೀ ಕಾಶೀ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿದರು. ಬಳಿಕ ಸ್ವಾಮೀಜಿಯವರು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ಸಂಸ್ಕೃತ ಕಾಲೇಜಿನ ಬಳಿಯಿಂದ ಬಿರುದಾವಳಿ,ವಾದ್ಯಘೋಷ,ವೇದಘೋಷದೊಂದಿಗೆ ಸ್ವಾಗತಿಸಿಲಾಯಿತು.
ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು.ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ ದಂಪತಿ ಮಾಲಿಕೆ ಮಂಗಳಾರತಿ ನಡೆಸಿದರು.
Kshetra Samachara
18/12/2021 09:00 pm