ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠದ ವತಿಯಿಂದ "ವಿಶ್ವಾರ್ಪಣಮ್" 14ನೇ ದಿನದ ಕಾರ್ಯಕ್ರಮ ಇಂದು ನಡೆಯಿತು. ನರಹರಿತೀರ್ಥ ವೇದಿಕೆ ರಾಜಾಂಗಣದಲ್ಲಿ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡಿದರು. ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಆಶೀರ್ವಚಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್, ಸಂಸ್ಕೃತಿ ಚಿಂತಕರಾದ ಶ್ರೀಮತಿ ಸಹನಾ ವಿಜಯ ಕುಮಾರ್, ವಿದ್ವಾನ್ ಸತ್ಯನಾರಾಯಣ ಆಚಾರ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಶ್ರೀಕೃಷ್ಣ ಮಠ ಪರ್ಯಾಯ ಅದಮಾರು ಮಠ ವ್ಯವಸ್ಥಾಪಕರಾದ ಗೋವಿಂದರಾಜ್ ಸ್ವಾಗತಿಸಿದರು. ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
18/12/2021 09:18 pm