ಉಡುಪಿ : ಕೋವಿಡ್ ಮೂರನೆಯ ಅಲೆ ಭೀತಿ ಹಿನ್ನೆಲೆಯಲ್ಲಿ ಡಿಸೆಂಬರ್ 25ರಂದು ಕೋವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಕ್ರಿಸ್ಮಸ್ ಹಬ್ಬ ಆಚರಿಸಲು ಉಡುಪಿ ಧರ್ಮ ಪ್ರಾಂತ್ಯ ನಿರ್ಧರಿಸಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವರ್ಷ ಪೂಜೆಗೆ ಹೆಚ್ಚು ಮಹತ್ವ ನೀಡುತ್ತೇವೆ. ಜನದಟ್ಟಣೆ ನಿಯಂತ್ರಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದೇವೆ. ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಎಲ್ಲರೂ ಕೂಡ ಕೋವಿಡ್ ನಿಯಮಾವಳಿ ಅನುಸರಿಸಿ ಪೂಜೆಯಲ್ಲಿ ಭಾಗವಹಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
Kshetra Samachara
20/12/2021 06:27 pm