ಉಡುಪಿ; ಕೇಂದ್ರ ಮತ್ತು ರಾಜ್ಯದಲ್ಲಿ ಹಿಂದುತ್ವ ಪರವಾದ ಸರ್ಕಾರಗಳು ಇವೆ. ಆದರೆ ಹಿಂದೂ ಧರ್ಮದ ರಕ್ಷಣೆಯ ವಿಚಾರದಲ್ಲಿ ಸರಕಾರಗಳು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಸೋಂದಾ ಸ್ವರ್ಣವಲ್ಲಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ವಿಶ್ವಾರ್ಪಣಂ ಧಾರ್ಮಿಕ ಸಭೆ ನಡೆಯುತ್ತಿದೆ. ಸಭೆಯಲ್ಲಿ ಉಪನ್ಯಾಸ ನೀಡಿದ ಶ್ರೀಗಳು, ಧಾರ್ಮಿಕ ದತ್ತಿ ಕಾನೂನು ವ್ಯವಸ್ಥಿತವಾಗಿಲ್ಲ. ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡಿ. ದೇವಸ್ಥಾನವನ್ನು ಸರಕಾರ ವಹಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥ ಇಲ್ಲ, ಅದನ್ನು ಭಕ್ತರ ಕೈಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ಸರಕಾರ ಮುಸ್ಲಿಮರಿಗೆ ವಕ್ಫ್ ಬೋರ್ಡ್ ಕೊಟ್ಟಿದೆ. ಮುಸ್ಲಿಮರ ಯಾವುದೇ ಧಾರ್ಮಿಕ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ.
ಸರಕಾರ ಅತಿಯಾದ ಹಸ್ತಕ್ಷೇಪ ಇಲ್ಲದ ಒಂದು ಕಾನೂನು ಮಾಡಿ. ಕಳೆದ ನಾಲ್ಕು ದಶಕಗಳಿಂದ ಈ ಬಗ್ಗೆ ಹೋರಾಟ ಆಗುತ್ತಿದೆ. ಕರ್ನಾಟಕ ಸರ್ಕಾರ ಒಂದು ಐತಿಹಾಸಿಕ ತೀರ್ಮಾನ ಕೈಗೊಳ್ಳಲಿ. ಬೇರೆ ರಾಜ್ಯಗಳಿಗೂ ಕರ್ನಾಟಕ ಮಾದರಿಯಾಗಲಿ ಎಂದು ಸೋಂದಾ ಸ್ವರ್ಣವಲ್ಲಿ ಸ್ವಾಮೀಜಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.
Kshetra Samachara
21/12/2021 04:25 pm