ಉದ್ಯಾವರ : ಉದ್ಯಾವರ ಸೌಹಾರ್ದ ಸಮಿತಿ ನೇತೃತ್ವದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಸರ್ವಧರ್ಮೀಯರ ಸೌಹಾರ್ದ ಕ್ರಿಸ್ ಮಸ್ ಆಚರಣೆ ನಡೆಯಿತು.
ಈ ವರ್ಷದ ಕ್ರಿಸ್ ಮಸ್ ನ್ನು 3 ಅಂಶಗಳೊಂದಿಗೆ ಆಚರಿಸೋಣ. ನಾವೆಲ್ಲ ಸಂತೋಷದಿಂದಿರುವುದರ ಜೊತೆಗೆ ಇತರರನ್ನು ಸಂತೋಷ ಪಡಿಸೋಣ. ಸಮಾಜಕ್ಕೆ ಒಳ್ಳೆಯದನ್ನು ಮಾಡುವವರಿಗೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸೋಣ. ನಾವೆಲ್ಲರೂ ತೆಗೆದುಕೊಳ್ಳುವ ಕೈ ಗಳಾಗದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಕೈಗಳಾಗೋಣ' ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಫಾ. ಚೇತನ್ ಲೋಬೊ ತಿಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಸಮಾಜ ಸೇವಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌಹಾರ್ದ ಸಮಿತಿ ಉದ್ಯಾವರದ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ವಹಿಸಿದ್ದರು. ವೇದಿಕೆಯಲ್ಲಿ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಸೌಹಾರ್ದ ಸಮಿತಿ ಕಾರ್ಯದರ್ಶಿ ಆಬಿದ್ ಅಲಿ ಸ್ವಾಗತಿಸಿದರೆ, ಕೋಶಾಧಿಕಾರಿ ಪ್ರತಾಪ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೊ ಮತ್ತು ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.
Kshetra Samachara
22/12/2021 11:51 am