ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ 47 ನೇ ಭಜನಾ ಮಂಗಲೋತ್ಸವ ಸಂಪನ್ನ

ಕಾಪು : ಶ್ರೀಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಕರಂದಾಡಿ ಇದರ 47 ನೇ ವಾರ್ಷಿಕ ಭಜನಾ ಮಂಗಳೋತ್ಸವ ಶನಿವಾರ ನೆರವೇರಿತು. ಮಂಗಲೋತ್ಸವ ನ್ನು ಗ್ರಾಮದ ಹಿರಿಯರಾದ ದೇವಕಿ ತಮ್ಮಯ್ಯ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಂಜಾನೆ 6 ಗಂಟೆಯಿಂದ ಸಂಜೆ 6 ರವರೆಗೆ ನಿರಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಭಜನಾ ಮಂಡಳಿ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್, ಗೌರವಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ, ಲೀಲಾಧರ್ ಶೆಟ್ಟಿ, ಮಹಿಳಾ ಮಂಡಲ ಅಧ್ಯಕ್ಷರಾದ ಸವಿತಾ , ರವೀಂದ್ರ ಆಚಾರ್ಯ, ಯತೀಶ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

26/12/2021 02:55 pm

Cinque Terre

17.06 K

Cinque Terre

0

ಸಂಬಂಧಿತ ಸುದ್ದಿ